Wednesday, June 24, 2026
Homeತಾಜಾ ಸುದ್ದಿಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಿ: ಶಾಸಕ ಅಶ್ವಥ್‌ ನಾರಾಯಣ್‌ ಆಗ್ರಹ

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಿ: ಶಾಸಕ ಅಶ್ವಥ್‌ ನಾರಾಯಣ್‌ ಆಗ್ರಹ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಾಸಕ ಅಶ್ವಥ್‌ ನಾರಾಯಣ್‌ ಒತ್ತಾಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು. ವಿದೇಶದಿಂದ ಹಣ ಬಂದಿದೆ ಎಂಬ ಆರೋಪಗಳಿವೆ. ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇನ್ನು ಈಗಾಗಲೇ ಪ್ರಕರಣದ ಹಿಂದಿರುವ ಕೈವಾಡ ಬಯಲಾಗಿದೆ. ದೂರುದಾರನಿಗೆ ಬೆಂಬಲ ನೀಡಿದವರ ಬಗ್ಗೆಯೂ ತನಿಖೆಯಾಗಲಿ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಎನ್‌ಐಎ ತನಿಖೆ ನಡೆಸಿದರೆ ಎಲ್ಲವೂ ಹೊರಬರುತ್ತದೆ ಎಂದು ತಿಳಿಸಿದರು

- Advertisement -

Latest News

error: Content is protected !!