Wednesday, June 24, 2026
Homeಕರಾವಳಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ಮಾಡಿದ ಶಾಸಕ ಹರೀಶ್ ಪೂಂಜ

108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ಮಾಡಿದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣಾ ಕಾರ್ಯಕ್ರಮ ಜ.10 ರಂದು ನಡೆಯಿತು.

ಬೆಳ್ತಂಗಡಿ ತಾಲೂಕಿನ 48 ಗ್ರಾಮ ಪಂಚಾಯತ್ ಹಾಗೂ ಒಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆದ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ತಮ್ಮ 94/ಸಿ, ನಡಾವಳಿ ಕಡತಗಳ ವಿಲೇಗೆ ಶಾಸಕರಲ್ಲಿ ವಿನಂತಿಸಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಜನಸ್ಪಂದನ ಸಭೆಯ ಫಲಶ್ರುತಿಯಾಗಿ 108 ಮಂದಿಗೆ ಹಕ್ಕು ಪತ್ರ ಹಾಗೂ 54 ಮುಂದಿಗೆ ನಡವಾಳಿ ನೀಡಲಾಯಿತು.

ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಕಳೆದ ಮೂರು ತಿಂಗಳಿಂದ ನಿರಂತರವಾಗಿ ತಾಲೂಕಿನ 48 ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ ಜನಸ್ಪಂದನ ಸಭೆಯಲ್ಲಿ ಜನರಿಂದ 94ಸಿ ವಿತರಣೆಗೊಳಿಸಲು ಅಡ್ಡಿಯಾಗಿರುವ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿದ್ದು ಮುಂದೆ ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳ ತನಿಖೆ ನಡೆಸಲು ಸೂಚಿಸಲಾಗಿತ್ತು. ಕೆಲ ಕಡತಗಳಲ್ಲಿ ಅರಣ್ಯದ ಎನ್ ಒಸಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಇದರ ಪ್ರತಿಫಲವಾಗಿ ಇಂದು 108 ಮುಂದಿಗೆ ಹಕ್ಕು ಪತ್ರ ಹಾಗೂ 54 ಮುಂದಿಗೆ ನಡವಾಳಿ ನೀಡಲಾಗಿದೆ. ರಾಜ್ಯದಲ್ಲಿಯೇ 32 ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಪ್ರಥಮವಾಗಿದೆ ಎಂದು ಹೇಳಿದ ಶಾಸಕರು ಕಡತಗಳ ವಿಲೇಗೆ ಕ್ರಮ ವಹಿಸಿದ ಅಧಿಕಾರಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಮಲವಂತಿಗೆಯ ಪ್ರಕಾಶ್ ಜೈನ್ ಎಳನೀರು, ಪಟ್ರಮೆಯ ಮನೋಜ್, ಕುಕ್ಕೇಡಿಯ ಅನಿತಾ ಕೆ. ಹಾಗೂ ಉಪ ತಹಶೀಲ್ದಾರ್ ಜಯ ಉಪಸ್ಥಿತರಿದ್ದರು.

- Advertisement -

Latest News

error: Content is protected !!