- Advertisement -
- Advertisement -
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಉನ್ನತ ಶಿಕ್ಷಣ ಪರಿಷತ್ ನಲ್ಲಿ ಸಚಿವ ಡಾ. ಸುಧಾಕರ್ ಅವರನ್ನು ಭೇಟಿಯಾಗಿ ಪ್ರಥಮ ದರ್ಜೆ ಕಾಲೇಜು ಆರಂಭಿಸುವಂತೆ ಶಾಸಕ ಪೂಂಜ ಲಿಖಿತ ಮನವಿ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆಯೂ ಹರೀಶ್ ಪೂಂಜ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.
- Advertisement -