Thursday, June 4, 2026
Homeತಾಜಾ ಸುದ್ದಿಬೆಳ್ತಂಗಡಿ: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ಬೆಳ್ತಂಗಡಿ: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

- Advertisement -
- Advertisement -

ಬೆಳ್ತಂಗಡಿ: ಗಾಳಿ ಮತ್ತು ಮಳೆಯ ತೀವ್ರತೆಗೆ ಹಾನಿಗೊಳಗಾದ ಗ್ರಾಮಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೆರಿಯ ಮತ್ತು ಚಿಬಿದ್ರೆ ಗ್ರಾಮಗಳ 20ಕ್ಕೂ ಹೆಚ್ಚು ಮನೆ ಹಾಗೂ ಜನವಸತಿ ಪ್ರದೇಶಗಳಿಗೆ ಭೇಟಿ ನೀಡಿ ಶಾಸಕ ಪೂಂಜ ಪರಿಶೀಲನೆ ನಡೆಸಿದರು.

ಅಲ್ಲದೇ ಹಾನಿಯುಂಟಾಗಿರುವ ಮಾಲಾಡಿ ಮತ್ತು ಸೋಣಂದೂರು ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮನೆ ಮತ್ತು ಆಸ್ತಿ ಪಾಸ್ತಿಗಳಿಗೆ ಹಾನಿ ಸಂಭವಿಸಿದೆ.

- Advertisement -

Latest News

error: Content is protected !!