Sunday, June 7, 2026
Homeಕರಾವಳಿತಣ್ಣೀರುಪಂತ ಅಳಕ್ಕೆಯಲ್ಲಿ ಆಕಸ್ಮಿಕ ಬೆಂಕಿಯಿಂದ ಹಾನಿಗೊಳಗಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ತಣ್ಣೀರುಪಂತ ಅಳಕ್ಕೆಯಲ್ಲಿ ಆಕಸ್ಮಿಕ ಬೆಂಕಿಯಿಂದ ಹಾನಿಗೊಳಗಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

- Advertisement -
- Advertisement -

ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬುವರ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿದರು.

ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ, ತಮ್ಮಿಂದಾಗುವ ಸಹಾಯಹಸ್ತ ‌ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು,ಶಕ್ತಿ ‌ಕೇಂದ್ರ ಪ್ರಮುಖರಾದ ಮಹೇಶ್  ಜೆಂಕ್ಯಾರ್,ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಚೇತನ್ ಸುವರ್ಣ ಅಳಕ್ಕೆ,ಹಾಗೂ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!