Thursday, June 25, 2026
Homeತಾಜಾ ಸುದ್ದಿಬಳ್ಳಾರಿಯಲ್ಲಿ ಫೈರಿಂಗ್ ಹಿನ್ನೆಲೆ; ಝೆಡ್ ಶ್ರೇಣಿ ಭದ್ರತೆಗಾಗಿ ಕೇಂದ್ರ ಮತ್ತು‌ ರಾಜ್ಯ ಸರ್ಕಾರಕ್ಕೆ ಶಾಸಕ ಜನಾರ್ದನ...

ಬಳ್ಳಾರಿಯಲ್ಲಿ ಫೈರಿಂಗ್ ಹಿನ್ನೆಲೆ; ಝೆಡ್ ಶ್ರೇಣಿ ಭದ್ರತೆಗಾಗಿ ಕೇಂದ್ರ ಮತ್ತು‌ ರಾಜ್ಯ ಸರ್ಕಾರಕ್ಕೆ ಶಾಸಕ ಜನಾರ್ದನ ರೆಡ್ಡಿ ಪತ್ರ

- Advertisement -
- Advertisement -

ಬಳ್ಳಾರಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಝೆಡ್ ಶ್ರೇಣಿಯ ಭದ್ರತೆ ಒದಗಿಸುವಂತೆ ಪತ್ರ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಡಿಜಿಪಿ ಡಾ. ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿರುವ ಶಾಸಕ ಜನಾರ್ದನ ರೆಡ್ಡಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ತಮಗೆ ಮತ್ತು ತಮ್ಮ ಕುಟುಂಬಕ್ಕೆ ಝೆಡ್ ಶ್ರೇಣಿಯ ಭದ್ರತೆ ಒದಗಿಸಬೇಕು, ಬಳ್ಳಾರಿ ನಗರ ಶಾಸಕ ನಾರಾ ಭರತ್ ‌ರೆಡ್ಡಿ ಮತ್ತು ಅವರ ಆಪ್ತ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕು ಹಾಗೂ‌ ಘಟನೆಯನ್ನು ನಿರ್ವಹಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಜನಾರ್ದನ ರೆಡ್ಡಿ ಒತ್ತಾಯಿಸಿದ್ದಾರೆ.

ಅಲ್ಲದೇ, ರಾಜ್ಯ ಸರ್ಕಾರ ಭದ್ರತೆ ನೀಡಲು ವಿಫಲವಾದರೆ ಮುಂದೆ ನನ್ನ ಮತ್ತು ಕುಟುಂಬದ ಮೇಲೆ ದಾಳಿ ನಡೆದರೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದೂ ಶಾಸಕ ಜನಾರ್ದನ ರೆಡ್ಡಿ ಪತ್ರದಲ್ಲಿ ಎಚ್ಚರಿಸಿದ್ದಾರೆ.

ವಾಲ್ಮೀಕಿ‌ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ಸಂಬಂಧ ಬಳ್ಳಾರಿ ನಗರದ ಅಹಂಭಾವಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸದ ಬಳಿ ಬಿಜೆಪಿ ಮತ್ತು‌ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿ ಫೈರಿಂಗ್ ನಡೆದಿತ್ತು.

- Advertisement -

Latest News

error: Content is protected !!