Thursday, June 4, 2026
HomeWorldಅಫ್ಘಾನಿಸ್ತಾನದಲ್ಲಿ ಸಿಲುಕಿರುವ ದಕ್ಷಿಣ ಕನ್ನಡದವರ ವಾಪಸಾತಿಗೆ ಕ್ರಮ ಕೈಗೊಳ್ಳಿ: ಸಿಎಂಗೆ ಶಾಸಕ ಖಾದರ್ ಪತ್ರ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ದಕ್ಷಿಣ ಕನ್ನಡದವರ ವಾಪಸಾತಿಗೆ ಕ್ರಮ ಕೈಗೊಳ್ಳಿ: ಸಿಎಂಗೆ ಶಾಸಕ ಖಾದರ್ ಪತ್ರ

- Advertisement -
- Advertisement -

ಬೆಂಗಳೂರು: ತಾಲಿಬಾನ್ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ದಕ್ಷಿಣ ಕನ್ನಡದವರ ವಾಪಾಸಾತಿಗೆ ಕ್ರಮ ಕೈಗೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಮಂಗಳೂರು ಶಾಸಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಶಾಸಕ ಖಾದರ್, ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿ ಮಾಡಿ ಕೂಡಾ ಮನವಿ ಮಾಡಿದ್ದಾರೆ.

ಕೂಡಲೇ ಈ ಸಂಬಂಧ ಉನ್ನತ ಮಟ್ಟದ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಕೂಡಾ ಸಿಎಂಗೆ ಆಗ್ರಹ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವರು ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದು, ಮಾನಸಿಕ ಒತ್ತಡದಲ್ಲಿ ಇದ್ದಾರೆ ಎಂದೂ ಖಾದರ್ ಹೇಳಿದ್ದಾರೆ.

ಕೇಂದ್ರ ಸಚಿವರು ಮತ್ತು ಕೇಂದ್ರ ಸರ್ಕಾರದ ಸಹಾಯದಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕೆಲಸ ಆಗಬೇಕು ಎಂದು ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!