Wednesday, June 26, 2024
Homeತಾಜಾ ಸುದ್ದಿಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರಿಗೆ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ: 10 ಸಾವಿರ...

ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರಿಗೆ ಆವಾಜ್ ಹಾಕಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ: 10 ಸಾವಿರ ದಂಡ ಹಾಕಿ ಬಿಸಿ ಮುಟ್ಟಿಸಿದ ಪೊಲೀಸರು 

spot_img
- Advertisement -
- Advertisement -

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ.

ರ‍್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ, ಪೊಲೀಸರಿಗೂ ಕೇರ್ ಮಾಡದೇ ಪೊಲೀಸರ ಮೇಲೆಯೇ ಕಾರು ಹತ್ತಿಸುವಂತೆ ಕಾರು ಚಲಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆನ್ನತ್ತಿದ ಪೊಲೀಸರನ್ನು ನೋಡಿ ಕ್ಯಾಪಿಟಲ್ ಹೋಟೆಲ್ ಒಳಗೆ ಕಾರು ಚಲಾಯಿಸಿದ್ದಾರೆ. ಕಾರು ವಾಪಸ್ ಬರುತ್ತಿದ್ದ ವೇಳೆ ಹೋಟೆಲ್ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಈ ವೇಳೆ ಟ್ರಾಫಿಕ್ ಪೊಲೀಸರ ಮೇಲೆಯೇ ದರ್ಪ ತೋರಿ `ನಾನು ಅರವಿಂದ ಲಿಂಬಾವಳಿ ಮಗಳು’ ಎಂದು ಆವಾಜ್ ಹಾಕಿದ್ದಾರೆ.

ನಾನು ಶಾಸಕ ಅರವಿಂದ ಲಿಂಬಾವಳಿ ಮಗಳು ಗೊತ್ತಾ? ಎಂದು ಪೊಲೀಸರಿಗೆ ಆವಾಜ್ ಹಾಕಿದ್ದಾರೆ. ಅಲ್ಲದೆ ಇದು MLA ಗಾಡಿ, ನಾನು ಅರವಿಂದ ಲಿಂಬಾವಳಿ ಅವರ ಪುತ್ರಿ ಎಂದು ವಾಗ್ವಾದ ನಡೆಸಿದ್ದಾರೆ. ರ‍್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದಿದ್ದಲ್ಲದೆ ಟ್ರಾಫಿಕ್ ಪೊಲೀಸರಿಗೇ ಆವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ. 10 ಸಾವಿರ ರೂ. ದಂಡ ಕಟ್ಟಿದ ಬಳಿಕ ಪೊಲೀಸರು ಕಾರನ್ನು ಬಿಟ್ಟು, ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಕಳುಹಿಸಿದ್ದಾರೆ. 

ಶಾಸಕರ ಹೆಸರು ಹೇಳುತ್ತಿದ್ದಂತೆ ಸೈಲೆಂಟ್ ಆದ ಟ್ರಾಫಿಕ್ ಪೊಲೀಸರು ಯಾವುದೇ ಕೇಸ್ ದಾಖಲಿಸದೇ ಹಾಗೇ ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ, ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!