Thursday, June 4, 2026
Homeತಾಜಾ ಸುದ್ದಿಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ  ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.

ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನನ್ನನ್ನು ಹೆದರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದು,  ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಗೆ ಮುಂದಾಗಿದ್ದರು ಎಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!