ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.
ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತೆ ಸಲ್ಲಿಸಲಾದ ಪ್ರಸ್ತಾವನೆಗೆ ಅನುಗುಣವಾಗಿ ಈ ಬಾರಿಗೆ ತಲಾ ರೂ.25 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ.
ಅನುಮೋದನೆಗೊಂಡ ಕಾಮಗಾರಿಗಳ ವಿವರ: ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ., ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ, ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.


