- Advertisement -
![]()
- Advertisement -
ಬೆಳ್ತಂಗಡಿ : ಕಾಡಾನೆ ದಾಳಿಯಿಂದ ಜುಲೈ 17 ರಂದು ಮೃತಪಟ್ಟ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜುಲೈ18 ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ನೀಡಿ ಸರಕಾರದಿಂದ 18 ಲಕ್ಷ ರೂಪಾಯಿ ಪರಿಹಾರ ಮತ್ತು ಐದು ವರ್ಷಗಳವರೆಗೆ ಪ್ರತಿ ತಿಂಗಳ 4,500 ಹಣ ಸಿಗುವ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ವೇಳೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ , ಮಾಜಿ ಅಧ್ಯಕ್ಷ ಯೋಗೀಶ್ ಅಲಂಬಿಲ, ರಾಘವೇಂದ್ರ,ಕುಶಾಲಪ್ಪ ಗೌಡ ಪೂವಾಜೆ, ಉಪ್ಪಿನಂಗಡಿ ಎಸಿಎಫ್ ಸುಬ್ಬಯ್ಯ ನಾಯ್ಕ್, ಪ್ರೋಬೇಷನರಿ ಹಸ್ತ ಶೆಟ್ಟಿ, ಉಪ್ಪಿನಂಗಡಿ ಅರ್.ಎಫ್.ಓ ರಾಘವೇಂದ್ರ ಭಾಗಿಯಾಗಿದ್ದರು.
- Advertisement -


