Thursday, June 4, 2026
Homeತಾಜಾ ಸುದ್ದಿಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೋವಿಡ್-19 ಸೋಂಕು ದೃಢ

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೋವಿಡ್-19 ಸೋಂಕು ದೃಢ

- Advertisement -
- Advertisement -

ಹಿರಿಯೂರು: ಶಾಸಕಿ ಕೆ.ಪೂರ್ಣಿಮಾ ಅವರಿಗೆ ಕೋವಿಡ್‌-19 ಇರುವುದು ಮಂಗಳವಾರ ದೃಢಪಟ್ಟಿದೆ. ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಕೊರೊನಾ ಸೋಂಕು ಅಂಟಿರುವುದು ಪರೀಕ್ಷೆಯಲ್ಲಿ ಖಚಿತವಾಗಿದೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಮುನ್ನೆಚ್ಚರಿಕೆ ವಹಿಸುವಂತೆ ಫೇಸ್‌ಬುಕ್‌ನಲ್ಲಿ ಶಾಸಕಿ ಮನವಿ ಮಾಡಿದ್ದಾರೆ.

ಶಾಸಕಿ ಪೂರ್ಣಿಮಾ ಫೇಸ್ಬುಕ್ ಪೋಸ್ಟ್ ಗೆ ಸಾರ್ವಜನಿಕರ ತೀವ್ರ ಪ್ರತಿಕ್ರಿಯಿಸಿದ್ದು,ಬೇಗ ಗುಣಮುಖರಬನ್ನಿ, ದೈರ್ಯವಾಗಿರಿ, ಶ್ರೀಕೃಷ್ಣನ ಆಶೀರ್ವಾಧವಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ಇರುವುದು ಖಚಿತವಾಗಿದೆ. ಗುಣಮುಖರಾಗುವವರೆಗೆ ಚಿಕಿತ್ಸೆ ಪಡೆಯುವ ಅಗತ್ಯವಿದೆ. ಮುಂದಿನ 20 ದಿನಗಳ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ’ ಎಂದು ಶಾಸಕಿ ಪೂರ್ಣಿಮಾ ತಿಳಿಸಿದ್ದಾರೆ.

- Advertisement -

Latest News

error: Content is protected !!