- Advertisement -
- Advertisement -
ಬಂಟ್ವಾಳ:ಕೊರೊನಾ ಸೋಂಕಿತ ಮಹಿಳೆಯ ಶವ ದಹನ ಮಾಡಿದ ಬಿ.ಸಿ.ರೋಡಿನ ಕೈಕುಂಜೆ ಹಿಂದೂರುದ್ರಭೂಮಿಗೆ ಶಾಸಕ ರಾಜೇಶ್ ನಾಯ್ಕ್ ಹಾಗೂ ತಾಲೂಕಿನ ಉನ್ನತ ಅಧಿಕಾರಿಗಳು ಇಂದು ಬೇಟಿ ನೀಡಿ ಸ್ಥಳ ಪರಶೀಲಿಸಿದರು.
ಈ ದಿನ ಬೆಳಿಗ್ಗಿನಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಉಹಾಪೋಹಗಳು ಹರಿದಾಡುತ್ತಿದ್ದು ಸ್ಥಳೀಯ ನಿವಾಸಿಗಳು ಅತಂಕಕ್ಕಿಡಾಗಿದ್ದರು.
ಈ ದಿನ ಬೆಳಿಗ್ಗೆ ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಪೌರಕಾರ್ಮಿಕರ ಜತೆ ತೆರಳಿ ಸ್ಯಾನಿಟೈಸರ್ ಸಿಂಪಡಿಸಿದ್ದು ಮಧ್ಯಾಹ್ನದ ವೇಳೆಗೆ ಪರಿಸರದಲ್ಲಿ ಕ್ರಿಮಿನಾಶಕ ದ್ರಾವಣ ಸಿಂಪಡಿಸಲಾಯಿತು.
ಈ ಸಂಧರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಸ್ಥಳೀಯರು ಪರಿಸರವನ್ನು ಪರಿಶೀಲಿಸಿದ್ದು ಅಧಿಕಾರಿಗಳು ಸೂಕ್ತ ಮಾಹಿತಿ ನೀಡಿದರು.
ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಕಂದಾಯ ನಿರೀಕ್ಷಕರಾದ ನವೀನ್, ರಾಮ ಕಾಟಿಪಳ್ಳ, ದಿವಾಕರ್, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ , ಪುರುಷೋತ್ತಮ ಉಪಸ್ಥಿತರಿದ್ದರು.
- Advertisement -