Sunday, June 7, 2026
Homeತಾಜಾ ಸುದ್ದಿಐವಾನ್ ಡಿಸೋಜಾ ರನ್ನು ಕೂಡಲೇ ಅರೆಸ್ಟ್ ಮಾಡಬೇಕು; ಬೆಂಗಳೂರಿನಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಒತ್ತಾಯ

ಐವಾನ್ ಡಿಸೋಜಾ ರನ್ನು ಕೂಡಲೇ ಅರೆಸ್ಟ್ ಮಾಡಬೇಕು; ಬೆಂಗಳೂರಿನಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಒತ್ತಾಯ

- Advertisement -
- Advertisement -

ಬೆಂಗಳೂರು: ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಕೂಡಲೇ ಪೊಲೀಸರು ಬಂಧಿಸಬೇಕು ಎಂದು ಬೆಂಗಳೂರಿನ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪ್ರತಿಭಟನಾ ಭಾಷಣ ಮಾಡಿದ ಶಾಸಕ ರಾಮಮೂರ್ತಿ ಐವಾನ್ ಡಿಸೋಜಾ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು‌.

ಐವಾನ್ ಡಿಸೋಜಾ ನಿನಗೆ ಮಾನ ಮರ್ಯಾದೆ ಇದ್ಯಾ ಎಂದು ಪ್ರಶ್ನೆ ಮಾಡಿದ ಸಿ.ಕೆ. ರಾಮಮೂರ್ತಿ, ನಿನಗೆ ತಾಕತ್ ಇದ್ದರೆ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ ಇದ್ದರೆ ರಾಜಭವನಕ್ಕೆ ನುಗ್ಗಿ ನೋಡೋಣ, ನಾವಾ ನೀವಾ ಅಂತಾ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ ನಡೆಸಿದೆ.

- Advertisement -

Latest News

error: Content is protected !!