Sunday, April 28, 2024
Homeಕರಾವಳಿದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಈಡಾದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮುಖ್ಯಮಂತ್ರಿ ಬಿಎಸ್ವೈಗೆ...

ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಈಡಾದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮುಖ್ಯಮಂತ್ರಿ ಬಿಎಸ್ವೈಗೆ ಅವರಿಗೆ ಶಾಸಕ ಹರೀಶ್ ಪೂಂಜ ಮನವಿ

spot_img
- Advertisement -
- Advertisement -

ಬೆಂಗಳೂರು ಕೊರೊನಾ ಎರಡನೇ ಅಲೆಯಿಂದಾಗಿ ಸಾಕಷ್ಟು ಜನ ತೊಂದರೆಗೆ ತುತ್ತಾಗಿದ್ದಾರೆ. ಅನೇಕ ಮಂದಿಗೆ ಜೀವನ ನಡೆಸೋದೇ ಕಷ್ಟವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಅವರ ನೇತೃತ್ವದ ನೇತೃತ್ವದ ಸರ್ಕಾರ 1250 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

ಇನ್ನು ಕರ್ನಾಟಕ ರಾಜ್ಯದ ಇತರ ಪ್ರದೇಶಗಳಿಗಿಂತ ಭೌಗೋಳಿಕವಾಗಿ ಭಿನ್ನವಾಗಿರುವ ಕರಾವಳಿ ಜನತೆ ವಿಭಿನ್ನ ರೀತಿಯ ಸಂಕಷ್ಟಕ್ಕೊಳಗಾಗಿದ್ದಾರೆ. ಹಾಗಾಗಿ ಕರಾವಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಬಸ್ಸುಗಳು ಸಂಚರಿಸುವುದರಿಂದ ಅವುಗಳಲ್ಲಿ ದುಡಿಯುತ್ತಿರುವ ಚಾಲಕರು, ನಿರ್ವಾಹಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಭೋದಕ ಮತ್ತು ಭೋದಕೆತರ ಸಿಬ್ಬಂದಿ,ಪುರೋಹಿತ ವರ್ಗದವರು, ಧರ್ಮದೈವಗಳ ಪರಿಚಾರಕರು, ಹೋಟೆಲ್ ಕಾರ್ಮಿಕರು, ಕಲ್ಯಾಣ ಮಂಟಪ ಮತ್ತು ದ್ವನಿ ಬೆಳಕು ಶಮಿಯಾನದಲ್ಲಿ ದುಡಿಯುವ ಕಾರ್ಮಿಕ ವರ್ಗದವರು,ಗೇರುಬೀಜ ಕಾರ್ಖಾನೆ, ಬೀಡಿ ಮತ್ತು ಇನ್ನಿತರ ವಲಯಗಳಲ್ಲಿ ದುಡಿಯುವ ಕಾರ್ಮಿಕ ವರ್ಗದ ಜನರು ಲಾಕ್ಡೌನ್ನಿಂದಾಗಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಎಲ್ಲಾ ಶ್ರಮಿಕ ವರ್ಗಕ್ಕೆ ಹೆಚ್ಚುವರಿಯಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರು ಮನವಿ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!