Thursday, June 4, 2026
Homeಕರಾವಳಿಮಂಗಳೂರು: ನಾಳೆ ಕರಾವಳಿ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ: ಉಳ್ಳಾಲ, ಸೋಮೇಶ್ವರದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ...

ಮಂಗಳೂರು: ನಾಳೆ ಕರಾವಳಿ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ: ಉಳ್ಳಾಲ, ಸೋಮೇಶ್ವರದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಲು ಶಾಸಕ‌ ಖಾದರ್ ಮನವಿ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಳ್ಳಾಲ, ಸೋಮೇಶ್ವರದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡುವಂತೆ ಶಾಸಕ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.

ಜು.12ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊಡಗು, ಉಡುಪಿ ಹಾಗೂ ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕಡಲ್ಕೊರೆತದಿಂದ ಹಾನಿಗೀಡಾದ ಮಂಗಳೂರು ವಿಧಾನ ಸಭಾ ಕ್ಷೇತ್ರದ ಉಳ್ಳಾಲ ಸೀ ಗ್ರೌಂಡ್, ಮೊಗವೀರಪಟ್ಣ, ಕೋಟೆಪುರ ಹಾಗೂ ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಹಾಗೂ ಮೀನುಗಾರರ ಅಹವಾಲು ಆಲಿಸುವಂತೆ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!