- Advertisement -


- Advertisement -
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ಸದ್ಯಕ್ಕೆ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಮಾತ್ರ ಈ ತಾತ್ಕಾಲಿಕ ಜವಾಬ್ದಾರಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಜಿಲ್ಲಾ ಉಸ್ತುವಾರಿ ಸಚಿವರ ಹುದ್ದೆಗಳ ಮರು ಹಂಚಿಕೆಯಾಗಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ಯು.ಟಿ. ಖಾದರ್ ಅವರಿಗೆ ಕೊಡಗು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚುವರಿ ಉಸ್ತುವಾರಿ ಹೊಣೆಯನ್ನೂ ಸಹ ನೀಡಲಾಗಿದೆ.
- Advertisement -


