Thursday, June 4, 2026
Homeಕರಾವಳಿಕೂಡಲೇ ದಕ್ಷಿಣ ಕನ್ನಡ ಲಾಕ್ ಡೌನ್ ಮಾಡಿ ಎಂದು ಮನವಿ ಮಾಡಿದ ಶಾಸಕ ಯು.ಟಿ ಖಾದರ್

ಕೂಡಲೇ ದಕ್ಷಿಣ ಕನ್ನಡ ಲಾಕ್ ಡೌನ್ ಮಾಡಿ ಎಂದು ಮನವಿ ಮಾಡಿದ ಶಾಸಕ ಯು.ಟಿ ಖಾದರ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ ಮಾಡುವಂತೆ ಮಾಜಿ ಸಚಿವ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದ್ದು ಬೆಂಗಳೂರಿನಂತೆ ಇಲ್ಲೂ ಲಾಕ್ ಡೌನ್ ಮಾಡಿ. ಆರೋಗ್ಯ ಹಾಗೂ ವೈದ್ಯಕೀಯ ಮೂಲಸೌಕರ್ಯ ಸಿದ್ಧತೆ ಮಾಡಿ ಸೂಕ್ತ ಸಮಯ ನೋಡಿ ಪೂರಕ ಯೋಜನೆಯ ಅನುಷ್ಠಾನ ಮಾದರಿ ಸಿದ್ದಪಡಿಸಿದ ಬಳಿಕವಷ್ಟೇ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು ಲಾಕ್ ಡೌನ್
ರಾಜ್ಯದಲ್ಲಿ ದಿನೇ ದಿನೇ ಭಾರೀ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ: 22.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

- Advertisement -

Latest News

error: Content is protected !!