Monday, May 6, 2024
Homeಕರಾವಳಿಪಟಾಕಿ ಮಳಿಗೆ ತೆರೆಯಲು ನಿಯಮಾವಳಿ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಅಸಮಾಧಾನ

ಪಟಾಕಿ ಮಳಿಗೆ ತೆರೆಯಲು ನಿಯಮಾವಳಿ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಅಸಮಾಧಾನ

spot_img
- Advertisement -
- Advertisement -

ಮಂಗಳೂರು: ದೀಪಾವಳಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟಾಕಿ ಮಳಿಗೆ ತೆರೆಯಲು ಈವರೆಗೂ ಇಲ್ಲದಿದ್ದ ಹೊಸ ನಿಯಮಗಳನ್ನು ಹೇರಲಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.

ಪಟಾಕಿ ಮಳಿಗೆ ಹಾಕಲು ಹತ್ತು ಹಲವು ನಿಮಮಾವಳಿ ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದ್ದು, ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಅಡ್ಡಿ ಮಾಡುತ್ತಿದ್ದಾರೆ ಎಂದು ವೇದವ್ಯಾಸ ಕಾಮತ್ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ‌ ಕಾಮತ್, ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದ್ದು, ಹಿಂದೂ ಧಾರ್ಮಿಕ ಆಚರಣೆಗಳಿಗೆ ಹಂತ ಹಂತವಾಗಿ ಕಡಿವಾಣ ಹಾಕಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತರ ಯಾವುದೇ ಧರ್ಮಗಳ ಹಬ್ಬದ ಸಂದರ್ಭದಲ್ಲಿ ನಿಯಮಾವಳಿ ವಿಧಿಸಲು ಕಾಂಗ್ರೆಸ್ ಸರ್ಕಾರಕ್ಕೆ ಧೈರ್ಯವೂ ಇಲ್ಲ, ಅವರ ಪೌರುಷ ಏನಿದ್ದರೂ ಕೇವಲ ಹಿಂದುಗಳ ಮೇಲೆ ಮಾತ್ರ ಎಂದು ಕಿಡಿ ಕಾರಿದ್ದಾರೆ

ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಪಟಾಕಿ ವಿಷಯವನ್ನು ಮುನ್ನಲೆಗೆ ತಂದು ಈ ಬಾರಿ ಕೇವಲ ಮೂರ್ನಾಲ್ಕು ಮೈದಾನದಲ್ಲಿ ಮಾತ್ರ ಪಟಾಕಿ ಅಂಗಡಿ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪ ಮಾಡಿರುವ ವೇದವ್ಯಾಸ ಕಾಮತ್, ಜಿಲ್ಲಾಡಳಿತ ಹೆಚ್ಚುವರಿ ಮೈದಾನಗಳಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆ ಹಾಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.‌

- Advertisement -
spot_img

Latest News

error: Content is protected !!