Sunday, June 7, 2026
Homeಕರಾವಳಿಬಿಜೆಪಿ ನಾಯಕರನ್ನು ಏರ್ ಪೋರ್ಟ್ ನಲ್ಲೇ ಕಂಬಳ ಮತ್ತು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದ ಶಾಸಕ ವೇದವ್ಯಾಸ ಕಾಮತ್

ಬಿಜೆಪಿ ನಾಯಕರನ್ನು ಏರ್ ಪೋರ್ಟ್ ನಲ್ಲೇ ಕಂಬಳ ಮತ್ತು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದ ಶಾಸಕ ವೇದವ್ಯಾಸ ಕಾಮತ್

- Advertisement -
- Advertisement -

ಮಂಗಳೂರು: ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ನಾಯಕರಿಗೆ ಶಾಸಕ ವೇದವ್ಯಾಸ ಕಾಮತ್ ವಿಮಾನ ನಿಲ್ದಾಣದಲ್ಲೇ ಕಂಬಳ ಮತ್ತು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಶಾಸಕ ವೇದವ್ಯಾಸ ಕಾಮತ್ ಏರ್ ಪೋರ್ಟ್ ನಲ್ಲೇ ಆಹ್ವಾನ ನೀಡಿದರು.

ಜಪ್ಪಿನಮೊಗರುವಿನಲ್ಲಿ ನಡೆಯಲಿರುವ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ ಹಾಗೂ ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಮತ್ತು ಡಾ. ಅಶ್ವಥ್ ನಾರಾಯಣ ಮಂಗಳೂರಿಗೆ ಆಗಮಿಸಿದ್ದರು.

- Advertisement -

Latest News

error: Content is protected !!