Wednesday, June 3, 2026
Homeಕರಾವಳಿಮಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಶಾಸಕ ವೇದವ್ಯಾಸ ಕಾಮತ್ ಮನವಿ

ಮಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಶಾಸಕ ವೇದವ್ಯಾಸ ಕಾಮತ್ ಮನವಿ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಆಗಾಗ ಭಯೋತ್ಪಾದನಾ ಚಟುವಟಿಕೆಗಳ ಕುರುಹು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ‌ ದಳ ಸ್ಥಾಪನೆಗೆ ಒತ್ತಡ ವ್ಯಕ್ತವಾಗಿದೆ. ಇಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನಲ್ಲಿ ಎನ್ ಐಎ ಸ್ಥಾಪನೆಯ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ.

ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಖುದ್ದು ಭೇಟಿ ಮಾಡಿದ ಶಾಸಕ ವೇದವ್ಯಾಸ ಕಾಮತ್ ಲಿಖಿತ ಮನವಿ ಸಲ್ಲಿಸಿದ್ದಾರೆ.

ಶಾಸಕರ ಮನವಿಗೆ ಸ್ಪಂದಿಸಿರುವ ಸಿಎಂ ಬೊಮ್ಮಾಯಿ ಮತ್ತು ಗೃಹ ಸಚಿವ ಜ್ಞಾನೇಂದ್ರ ಮಂಗಳೂರಿನಲ್ಲಿ ಎನ್ ಐಎ ಸ್ಥಾಪನೆ ಸಂಬಂಧ ಅಗತ್ಯ ಕ್ರಮದ ಭರವಸೆ ನೀಡಿದ್ದಾರೆ.

ಕರಾವಳಿಯಲ್ಲಿ ಆಗಾಗ ಉಗ್ರ ಚಟುವಟಿಕೆಗಳ ನಂಟು ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಎನ್ ಐಎ ಸ್ಥಾಪನೆ ಸಂಬಂಧ ಸತತವಾಗಿ ಕೂಗು ಕೇಳಿ ಬರುತ್ತಲೇ ಇದೆ.

- Advertisement -

Latest News

error: Content is protected !!