Sunday, October 18, 2026
Homeಕರಾವಳಿಉಡುಪಿನೂತನ ಜಿಲ್ಲಾಸ್ಪತ್ರೆಗೆ 30 ವರ್ಷ ಹಳೆಯ ಹಾಸಿಗೆಗಳ ಸ್ಥಳಾಂತರ; ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಯಶ್‌ಪಾಲ್...

ನೂತನ ಜಿಲ್ಲಾಸ್ಪತ್ರೆಗೆ 30 ವರ್ಷ ಹಳೆಯ ಹಾಸಿಗೆಗಳ ಸ್ಥಳಾಂತರ; ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಯಶ್‌ಪಾಲ್ ಸುವರ್ಣ

- Advertisement -
- Advertisement -

ಉಡುಪಿ: ಅಗತ್ಯ ವೈದ್ಯಕೀಯ ಉಪಕರಣಗಳು, ವೈದ್ಯರು ಮತ್ತು ಸಿಬ್ಬಂದಿಗಳಿಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಗೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ಸರ್ಕಾರ ಮುಂದಾಗಿರುವುದನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ವಿರೋಧಿಸಿದ್ದಾರೆ.

250 ಹಾಸಿಗೆಗಳ ಆರು ಮಹಡಿಗಳ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸದೆ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿರುವುದು ಸರಿಯಲ್ಲ. ಆಸ್ಪತ್ರೆಗೆ ವೈದ್ಯರು, ಶುಶ್ರೂಷಕರು ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಲ್ಲ. ಸ್ಕ್ಯಾನಿಂಗ್, ಎಕ್ಸ್‌ರೇ ಯಂತ್ರಗಳು, ಕಂಪ್ಯೂಟರ್‌ಗಳು ಹಾಗೂ ಇತರ ಅಗತ್ಯ ಉಪಕರಣಗಳನ್ನೂ ಒದಗಿಸಿಲ್ಲ. ಕಟ್ಟಡದ ಸ್ವಚ್ಛತೆಗೆ ಬೇಕಾದ ಸಿಬ್ಬಂದಿಯ ವ್ಯವಸ್ಥೆಯೂ ಆಗಿಲ್ಲ ಎಂದು ಆರೋಪಿಸಿದರು.

ಪ್ರಸ್ತುತ ತಾಲೂಕು ಆಸ್ಪತ್ರೆಯಲ್ಲಿರುವ 30 ವರ್ಷ ಹಳೆಯ ಹಾಸಿಗೆಗಳನ್ನೇ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಅಗತ್ಯ ಸೌಲಭ್ಯಗಳಿಲ್ಲದೆ ಆಸ್ಪತ್ರೆ ಸ್ಥಳಾಂತರಿಸಿದರೆ, ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವುದಿಲ್ಲ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದರೂ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯ ಸೌಲಭ್ಯಗಳು ಮತ್ತು ವಿಶೇಷ ಚಿಕಿತ್ಸಾ ವಿಭಾಗಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗಲಿದೆ ಎಂದು ಯಶ್ಪಾಲ್ ಸುವರ್ಣ ತಿಳಿಸಿದರು.

- Advertisement -

Latest News

error: Content is protected !!