Thursday, June 4, 2026
Homeಕರಾವಳಿಕಡಬ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,...

ಕಡಬ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ

- Advertisement -
- Advertisement -

ಮಂಗಳೂರು; ಕಾಲೇಜಿನಲ್ಲಿ ಆಸಿಡ್ ದಾಳಿಯಿಂದಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು.

ಆಸ್ಯಿಡ್ ದಾಳಿಯಿಂದ ಮೂವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು ಒಬ್ಬಾಕೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಆದ್ರೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆರೋಪಿ ಈಗಾಗಲೇ ಪೊಲೀಸ್ ವಶದಲ್ಲಿದ್ದು ತನಿಖೆ ಮುಂದುವರೆದಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ  ನಡೆಸುತ್ತಿದ್ದಾರೆ.

- Advertisement -

Latest News

error: Content is protected !!