Tuesday, April 30, 2024
Homeಕರಾವಳಿಬದಿಯಡ್ಕದ ವೈದ್ಯ ಕೃಷ್ಣಮೂರ್ತಿ ಸಾವು ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಶಾಸಕರು...

ಬದಿಯಡ್ಕದ ವೈದ್ಯ ಕೃಷ್ಣಮೂರ್ತಿ ಸಾವು ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಶಾಸಕರು ಮತ್ತು ವಿಹಿಂಪ ಮನವಿ

spot_img
- Advertisement -
- Advertisement -

ಮಂಗಳೂರು: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿ ಅವರ ಸಾವಿನ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಇಂದು ಮಂಗಳೂರಿನಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ಶೆಟ್ಟಿ ಮನವಿ ಸಲ್ಲಿಸಿದರು.

ಇದೇ ವೇಳೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.

ನವೆಂಬರ್ 8 ರಂದು ನಾಪತ್ತೆಯಾಗಿದ್ದ ವೈದ್ಯ ಡಾ. ಕೃಷ್ಣಮೂರ್ತಿ ನವೆಂಬರ್ 10 ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲ್ವೇ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದರು.

ಡಾ. ಕೃಷ್ಣಮೂರ್ತಿ ಸಾವಿನ ಕುರಿತು ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!