Sunday, May 5, 2024
Homeತಾಜಾ ಸುದ್ದಿಸಚಿವನಾಗುವ ಎಚ್.ವಿಶ್ವನಾಥ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರು: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರಿಂ

ಸಚಿವನಾಗುವ ಎಚ್.ವಿಶ್ವನಾಥ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರು: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರಿಂ

spot_img
- Advertisement -
- Advertisement -

ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲುಂಡಿದ್ದ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಕಲ್ಪಿಸಲು ಬಿಜೆಪಿ ಸರಕಾರ ವಿಧಾನಪರಿಷತ್ ಗೆ ನಾಮ ನಿರ್ದೇಶನಕ್ಕೆ ಆಯ್ಕೆ ಮಾಡಲಾಗಿತ್ತು.

ನಾಮ ನಿರ್ದೇಶನ ಆಧಾರದ ಮೇಲೆ ಸಚಿವ ಸ್ಥಾನ ಅಲಂರಿಸುವುದು ಸಾಧ್ಯವಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶ್ವನಾಥ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ವಿಶ್ವನಾಥ್ ಸಚಿವರಾಗುವ ಕನಸಿಗೆ ತಣ್ಣೀರು ಎರಚಿತು.

ಸುಪ್ರೀಂಕೋರ್ಟ್ ನಲ್ಲಿ ತಮ್ಮ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಎಂಎಲ್ ಸಿ ಎಚ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ, ವಕೀಲರ ಜೊತೆ ಚರ್ಚಿಸಿ ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ನಿರ್ದರಿಸುತ್ತೇನೆ, ನಾಮ ನಿರ್ದೇಶಿತ ಸದಸ್ಯನಾಗಿದ್ದರಿಂದ ಸಮಸ್ಯೆಯಾಗಿದೆ, ಇಲ್ಲಿ ಯಾರೂ ಕೂಡ ಏಕಾಂಗಿಯಲ್ಲ, ನಾನು ಸದ್ಯ ಎಂಎಲ್ ಸಿಯಾಗಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸಚಿವ ಸ್ಥಾನ ಹೋದರೂ ನನಗೆ ಸಭಾಪತಿ ಹುದ್ದೆ ನೀಡಬಹುದು. ಮುಂದೆ ಒಂದು ವೇಳೆ ಪಕ್ಷ ನನಗೆ ಸಭಾಪತಿ ಹುದ್ದೆ ಕಲ್ಪಿಸಿದರೆ ನೋಡೋಣ ಎಂದು ಹೇಳಿದರು. ಒಟ್ಟಾರೆ ವಿಶ್ವನಾಥ್ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಸಂವಿಧಾನದ 164 (1ಬಿ) ಮತ್ತು 361 (b) ವಿಧಿಗಳ ಅಡಿ ಮುಂದೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗುವವರೆಗೂ ಸಚಿವರಾಗಲು ಎಚ್ ವಿಶ್ವನಾಥ್ ಅವರಿಗೆ ಅರ್ಹತೆ ಇಲ್ಲ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಮಾನ್ಯ ಮಾಡಿದೆ. ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಇಬ್ಬರೂ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಆದರೆ ಆರ್ ಶಂಕರ್ ಅವರು ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಅವರನ್ನು ಬಿಜೆಪಿ ವಿಧಾನಪರಿಷತ್‌ಗೆ ಆಯ್ಕೆ ಮಾಡಾಲಾಗಿತ್ತು.

ವಿಶ್ವನಾಥ್ ಅವರು ಸಾಹಿತ್ಯ ಕ್ಷೇತ್ರದ ವಿಭಾಗದಿಂದ ವಿಧಾನಪರಿಷತ್‌ಗೆ ನಾಮನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು ಸಚಿವ ಸಂಪುಟ ಸೇರ್ಪಡೆಯಾಗಲು ಅರ್ಹರಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

- Advertisement -
spot_img

Latest News

error: Content is protected !!