Thursday, June 4, 2026
Homeಕರಾವಳಿವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರೀಶ್ ಕುಮಾರ್ ಅವರು ಕೇರಳ ಮತ್ತು ಮಾ.16ರವರೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಉಪ ಚುನಾವನೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು. ನಂತರ ಅವರ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ, ಎ.16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ವರದಿಯಾಗಿದೆ.

- Advertisement -

Latest News

error: Content is protected !!