Thursday, June 4, 2026
Homeಕರಾವಳಿಸುಳ್ಯ ತಾಲೂಕಿನ ವಿವಿಧ ಗ್ರಾ.ಪಂ. ಗಳಿಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಸುಳ್ಯ ತಾಲೂಕಿನ ವಿವಿಧ ಗ್ರಾ.ಪಂ. ಗಳಿಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ

- Advertisement -
- Advertisement -

ಸುಳ್ಯ: ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರ ಜೊತೆಗೆ ಚರ್ಚೆ ನಡೆಸಿದರು.

ಕನಕಮಜಲು, ಜಾಲ್ಸೂರು ಹಾಗೂ ಅರಂತೋಡು ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ವಸತಿ, ನಿವೇಶನ, ಜಲ ಜೀವನ್ ಮಿಷನ್ ಯೋಜನೆಯ ಪ್ರಗತಿ ಸಹಿತ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಚರ್ಚೆ ನಡೆಸಿದರು. ಇದೇ ವೇಳೆ, ಸುಳ್ಯ ನಗರ ಪಂಚಾಯತಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೂಡಾ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,  ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಎನ್. ಮನ್ಮಥ, ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ‌, ಸುಳ್ಯ ತಾಲ್ಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ವಿವಿಧ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!