ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕೆಲವರನ್ನಾದರೂ ಗುರುತಿಸಿ ಅಧಿಕಾರ ಕೊಡಬೇಕು ಎಂದು ಕೆಪಿಸಿಸಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಲೋಕಸಭಾ ಚುನಾವಣಾ ಸಿದ್ಧತೆಯ ಭಾಗವಾಗಿ ನಡೆದ ಕೆಪಿಸಿಸಿ ಪ್ರಚಾರ ಸಮಿತಿ ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರಿಗೆ ಮಂಜುನಾಥ ಭಂಡಾರಿ ಮನವಿ ಮಾಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ, ಎಲ್ಲರಿಗೂ ಅಧಿಕಾರ ಕೊಡಲು ಆಗುವುದಿಲ್ಲ, ಆದರೆ ಕೆಲವರನ್ನಾದರೂ ಗುರುತಿಸಿ ಅಧಿಕಾರ ಕೊಡಬೇಕು, ಆಗ ಕಾರ್ಯಕರ್ತರಿಗೆ ನಮ್ಮನ್ನು ಗುರುತಿಸಿದ್ದಾರೆ ಎಂದು ಉತ್ಸಾಹ ಹೆಚ್ಚಾಗಲಿದೆ ಎಂದು ಮಂಜುನಾಥ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ.
ಕೆಪಿಸಿಸಿ ಪ್ರಚಾರ ಸಮಿತಿಯಿಂದ
ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಚಾರ ಸಮಿತಿ ಪದಾಧಿಕಾರಿಗಳ ಸಭೆ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಾಜಿ ಎಂಎಲ್ಸಿ ರಮೇಶ್ ಬಾಬು ಹಾಗೂ ಜಿಲ್ಲಾ ಮಟ್ಟದ ಪ್ರಚಾರ ಸಮಿತಿ ಪದಾಧಿಕಾರಿಗಳು ಭಾಗಿಯಾಗಿದ್ದರು.