Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಪೊಲೀಸರ ಕಾರ್ಯಾಚರಣೆ ವೇಳೆ 4 ಮೊಬೈಲ್ ಪತ್ತೆ

ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಪೊಲೀಸರ ಕಾರ್ಯಾಚರಣೆ ವೇಳೆ 4 ಮೊಬೈಲ್ ಪತ್ತೆ

- Advertisement -
- Advertisement -

ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಪೊಲೀಸರು ಕಾರ್ಯಾಚರಣೆ ವೇಳೆ 4 ಮೊಬೈಲ್ ಪತ್ತೆಯಾಗಿವೆ.

ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗೃಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಇದೇ ಸಮಯದಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 2 ಕೊಠಡಿಗಳಲ್ಲಿ ಗಲಾಟೆಗೆ ಸಂಬಂಸಿದಂತೆ ಪರಿಸ್ಥಿತಿ ನಿಯಂತ್ರಣಗೊಂಡ ಅನಂತರ ಸಿ.ಸಿ.ಟಿ.ವಿ ದಶ್ಯಾವಳಿಗಳನ್ನು ಪರಿಶೀಲಿಸಿದಾಗ ಗಲಾಟೆಯಲ್ಲಿ ‘ಎ’ ವಿಭಾಗದ ಮೊಯಿದ್ದಿನ್ ಫರಾದ್, ಸರ್ಫರಾಜ್, ಮೊಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಜೀದ್, ಮೊಹಮ್ಮದ್ ಸಾಯಿಲ್ ಅಕ್ರಂ ಮತ್ತು ಮಹಮ್ಮದ್ ಹನೀಫ್ ಹಾಗೂ ‘ಬಿ’ ವಿಭಾಗದ ಲತೇಶ್ ಜೋಗಿ , ಮಂಜುನಾಥ , ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ, ಗುರುರಾಜ ಹಾಗೂ ಸುಮಂತ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು ,ಅವರ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!