ಮಡಿಕೇರಿ : ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯರಿಗೆ/ಹುಡುಗಿಯರ ಮೊಬೈಲ್‌ಗೆ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಜನತೆ ಜಾಡಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ ನಗರದಲ್ಲಿ ಮೊಬೈಲ್ ಅಂಗಡಿ ಹಾಗೂ ಕರೆನ್ಸಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮುದಾಸಿರ್ ಎನ್ನವ ಕಾಮುಕನೇ ಹೀಗೆ ಹೊಡೆತ ತಿಂದಿರುವ ವ್ಯಕ್ತಿಯಾಗಿದ್ದಾನೆ.

ಈತ ಪದೇ ಪದೇ ಮೊಬೈಲ್‍ಗೆ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ ಎನ್ನಲಾಗಿದೆ.
ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ಆರೋಪಿ, ಅವರಿಗೆ ಖಾಲಿ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ. ಆ ಮೂಲಕ ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.


