Saturday, June 6, 2026
Homeಕರಾವಳಿಉಡುಪಿಕುಂದಾಪುರ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಕುಂದಾಪುರ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಕುಂದಾಪುರ : ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಸಬ್ ಇನ್ಸ್‌ಪೆಕ್ಟರ್ ಪವನ್ ನಾಯಕ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು.

ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫ್ಝಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತರು.

ಮುರ್ಡೇಶ್ವರ ಬೀಚ್ ಬಳಿ ಆರೋಪಿಗಳನ್ನು ಬಂಧಿಸಿದ್ದು ಇವರಿಂದ‌ ಕಳವು ಮಾಡಿದ 20 ಸಾವಿರ ಮೌಲ್ಯದ ಮೊಬೈಲ್ ಪೋನುಗಳು, ಕೃತ್ಯಕ್ಕೆ ಉಪಯೋಗಿಸಿದ 8 ಲಕ್ಷ ಮೌಲ್ಯದ ಕಾರು, ಮೂರು ಪವರ್ ಬಂಕ್ ಮೊದಲಾದವುಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Latest News

error: Content is protected !!