Wednesday, June 3, 2026
Homeಕರಾವಳಿಬೆಳ್ತಂಗಡಿ: ಮಾನವೀಯತೆ ಮೆರೆದ‌ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್

ಬೆಳ್ತಂಗಡಿ: ಮಾನವೀಯತೆ ಮೆರೆದ‌ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಅಂಬ್ರೋಳಿ ನಿವಾಸಿ‌ ಮಾನಸಿಕವಾಗಿ ಅಸ್ವಸ್ಥಳಾಗಿರುವ ಯುವತಿಯೊಬ್ಬಳ ಆರೋಗ್ಯ ಪರಿಸ್ಥಿತಿ ಕಳೆದೆರಡು ತಿಂಗಳಿನಿಂದ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿತ್ತು.

ವಿಚಾರವನ್ನು ಊರವರು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಅವರ ಗಮನಕ್ಕೆ ತಂದಾಗ, ತಕ್ಷಣ ಸ್ಪಂದಿಸಿದ ಹರೀಶ್ ಕುಮಾರ್ ಅವರು, ಸ್ಥಳೀಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಶ್ರೀ ಮಧುಕರ ಸುವರ್ಣ ಮತ್ತು ಶ್ರೀ ರಾಜೇಶ್ ಬೆದ್ರಬೆಟ್ಟು ಅವರ ಮೂಲಕ ಯುವತಿಯನ್ನು ಕಂಕನಾಡಿಯ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸೇರ್ಪಡೆಗೊಳಿಸುವ ವ್ಯವಸ್ಥೆಯನ್ನು ಮಾಡಿದ್ದಾರೆ.

ಅದಲ್ಲದೆ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಯುವತಿಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸಿಕೊಡುವಂತೆ ಸೂಚಿಸಿದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!