Friday, June 5, 2026
Homeತಾಜಾ ಸುದ್ದಿಕೊರೊನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಯೋಗ ಪ್ರಮುಖ ಅಸ್ತ್ರ: ಪ್ರಧಾನಿ...

ಕೊರೊನ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಯೋಗ ಪ್ರಮುಖ ಅಸ್ತ್ರ: ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕೊರೊನ ವೈರಸ್​ ಬಿಕ್ಕಟ್ಟಿನ ಸಮಯದಲ್ಲಿ ಯೋಗದ ಪ್ರಾಮುಖ್ಯತೆ ಹೆಚ್ಚಿದೆ ಎಂದು ತಿಳಿಸಿದರು.
ಯೋಗ ದಿನಾಚರಣೆ ಅಂಗವಾಗಿ ಇಂದು ‘ ಕುಟುಂಬದ ಜೊತೆ ಯೋಗ ಈ ವರ್ಷದ ಥೀಮ್ ಆಗಿದೆ.
ದೇಶದ ಜನತೆಗೆ ಸಂದೇಶ ನೀಡಿದ ಮೋದಿ, ಯೋಗ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಯೋಗದಿಂದ ಮಾನಸಿಕ ಶಾಂತಿ ಸಿಗುತ್ತದೆ. ಅಲ್ಲದೇ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ರೋಗನಿರೋಧಕ ಶಕ್ತಿ ಜಾಸ್ತಿಯಾದರೆ ಕೊರೋನಾ ನಿಯಂತ್ರಣಕ್ಕೆ ಬರುತ್ತದೆ. ಯೋಗ ನಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ದೈಹಿಕ ಶಕ್ತಿ ಮಾತ್ರವಲ್ಲ, ಮಾನಸಿಕ ಸಮತೋಲನ ಕಾಪಾಡುತ್ತದೆ. ಎಲ್ಲರೂ ಯೋಗ ಮಾಡಿ ಎಂದು ಸಲಹೆ ನೀಡಿದ್ದಾರೆ.
ಈ ಬಾರಿ ಕೊರೋನಾ ಕಾರಣದಿಂದ ಮನೆಯಲ್ಲೇ ಯೋಗ ಮಾಡಲು ಸಲಹೆ ನೀಡಲಾಗಿದ್ದು, ಅನೇಕ ಕಡೆ ಅಂತರ ಕಾಯ್ದುಕೊಂಡು ಯೋಗ ಮಾಡುವ ಮೂಲಕ ಯೋಗ ದಿನಾಚರಣೆ ಮಾಡಲಾಗಿದೆ.

- Advertisement -

Latest News

error: Content is protected !!