Saturday, May 18, 2024
Homeಕರಾವಳಿಸೆ.2ರಂದು ಮಂಗಳೂರಿಗೆ ಮೋದಿ ಆಗಮನ‌ ಹಿನ್ನೆಲೆ: ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ‌ ಪೂರ್ವಭಾವಿ‌ ಸಭೆ

ಸೆ.2ರಂದು ಮಂಗಳೂರಿಗೆ ಮೋದಿ ಆಗಮನ‌ ಹಿನ್ನೆಲೆ: ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ‌ ಪೂರ್ವಭಾವಿ‌ ಸಭೆ

spot_img
- Advertisement -
- Advertisement -

ಬಂಟ್ವಾಳ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಿ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಜರಗಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಯವರ ಉಪಸ್ಥಿತಿಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಬಿ ಸಿ ರೋಡು ಸ್ಷಶ ಕಲಾಮಂದಿರದಲ್ಲಿ ಪೂರ್ವಭಾವಿ ಸಭೆ ಜರಗಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತನಾಡಿ ಜಿಲ್ಲೆಗೆ ಆಗಮಿಸುವ ಪ್ರಧಾನ ಮಂತ್ರಿಯವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಲಿರುವುದರಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ನಮ್ಮ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತುಗಳಿಂದ ಕನಿಷ್ಟ 100 ಕಾರ್ಯಕರ್ತರನ್ನು ಹಾಗೂ ಪಕ್ಷದ ಅಭಿಮಾನಿಗಳನ್ನು ಕರೆದುಕೊಂಡು ಬರುವ ಜವಾಬ್ದಾರಿಯನ್ನು ಪಕ್ಷದ ಪ್ರಮುಖರು ವಹಿಸಿಕೊಂಡು ಬಂಟ್ವಾಳದಿಂದ ಸುಮಾರು 25000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಗುರಿ ಹೊಂದಿದೆ ಎಂದು ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು.

ಸಭೆಯಲ್ಲಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಪ್ರಸಾದ್ ಕುಮಾರ್ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಪದ್ಮನಾಭ ಕೊಟ್ಟಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ ಶ್ರೀಮತಿ ಸುಲೋಚನ ಭಟ್ ಮತ್ತು ಕ್ಷೇತ್ರ ಪದಾಧಿಕಾರಿಗಳು ಪಕ್ಷದ ಜಿಲ್ಲಾ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ವಿವಿಧ ಪ್ರಕೋಷ್ಟ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!