Saturday, May 4, 2024
Homeತಾಜಾ ಸುದ್ದಿಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ತರಲು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ತರಲು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

spot_img
- Advertisement -
- Advertisement -

ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ತರಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

2024ರ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಕ್ರಮ ಕೈಗೊಳ್ಳಲಾಗಿದೆ.2019ರ ಲೋಕಸಭಾ ಚುನಾವಣೆಯ ವೇಳೆ CAA ಜಾರಿಗೆ ತರುವುದು ಬಿಜೆಪಿಯ ಪ್ರಣಾಳಿಕೆಯ ಭಾಗವಾಗಿತ್ತು. ಈಗ 2024ರ ಚುನಾವಣೆಯ ಹೊಸ್ತಿಲಲ್ಲಿರುವಾಗ ಕಾಯ್ದೆ ಜಾರಿಗೆ ಬಂದಿದೆ.

ಮಸೂದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಜೈನ್, ಕ್ರಿಶ್ಚಿಯನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನಾಗರಿಕರಿಗೆ ಪೌರತ್ವವನ್ನು ನೀಡಲು ಕಾನೂನಿನ ನಿಯಮಗಳನ್ನು ಕೇಂದ್ರ ಇಂದು ಘೋಷಿಸಿದೆ.

- Advertisement -
spot_img

Latest News

error: Content is protected !!