ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.
ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು.
ಇನ್ನು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದರು. ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದರು. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನವನ್ನು ಮೋದಿ ಪಡೆದರು.
ಮಠದಲ್ಲಿ ಈ ಸಂದರ್ಭದಲ್ಲಿದ್ದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಿರೂರು ವೇದವರ್ಧನ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಮೋದಿಯವರು ಮಾತನಾಡಿಸಿದರು.


