ನವದೆಹಲಿ : ಇಂದು ರಾಷ್ಟ್ರೀಯ ಶಿಕ್ಷಣ ಕುರಿತ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಜನತೆಗೆ ತಿಳಿಸಿದರು.
ಇದೇ ವೇಳೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಕೇಂದ್ರ ಸಂವಹನ ರಾಜ್ಯ ಸಚಿವ ಸಂಜಯ್ ಧೋತ್ರೆ,ಅಧ್ಯಕ್ಷರು ಮತ್ತು ಸದಸ್ಯರು, ಕರಡು ಎನ್‌ಇಪಿ ಸಮಿತಿ ಮತ್ತು ಪ್ರಖ್ಯಾತ ಶಿಕ್ಷಣ ತಜ್ಞರು / ವಿಜ್ಞಾನಿಗಳು ಸೇರಿದಂತೆ ಹಲವು ಮಂದಿ ಹಾಜರಿದ್ದರು.
ನೂತನ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿಯವರು , ವಿದ್ಯಾರ್ಥಿಗಳು ಸಂಶೋಧನೆಯತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಯಾರು ಸಣ್ಣವರು, ದೊಡ್ಡವರು ಎಂಬುದಿಲ್ಲ. ದೇಶದ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ಕಲ್ಪಿಸಿಕೊಡಲಾಗಿದೆ ಎಂದರು.
ದೇಶಕ್ಕೆ ಉತ್ತಮ ವಿದ್ಯಾರ್ಥಿಗಳು, ಕೌಶಲ್ಯವುಳ್ಳವರು, ಉತ್ತಮ ವ್ಯಕ್ತಿಗಳನ್ನು ಕೊಡುವ ಸಾಮರ್ಥ್ಯ ಶಿಕ್ಷಕರಿಗೆ ಇದೆ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ದೊಡ್ಡ ಬದಲಾವಣೆ ತರಲಿದೆ ಎಂದು ಹೇಳಿದರು.
ಉತ್ತಮ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ವಿಶೇಷ ಗೌರವ ಸಿಗಲಿದೆ. ಹೊಸ ಶಿಕ್ಷಣ ನೀತಿಯಲ್ಲಿ ಪುಸ್ತಕದ ಹೊರೆ ಕಡಿಮೆಯಾಗಲಿದೆ. ಸದ್ಯ ಓದುತ್ತಿರುವ ಕಲಿಕೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ, ಬೇರೆ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶ ಇದೆ ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪುಸ್ತಕದ ಹೊರೆ ಕಡಿಮೆಯಾಗಿ , ನವ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಲಿದೆ : ಪ್ರಧಾನಿ ಮೋದಿ
- Advertisement -
- Advertisement -
- Advertisement -
