Saturday, April 27, 2024
Homeತಾಜಾ ಸುದ್ದಿಮೋದಿ ವರ್ಚಸ್ಸು ಹೆಚ್ಚಾಗುತ್ತಿದೆ; ಈ ಕಾರಣದಿಂದ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲು ಹಿಂದೇಟು..!; ಬಿ.ವೈ ವಿಜಯೇಂದ್ರ

ಮೋದಿ ವರ್ಚಸ್ಸು ಹೆಚ್ಚಾಗುತ್ತಿದೆ; ಈ ಕಾರಣದಿಂದ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲು ಹಿಂದೇಟು..!; ಬಿ.ವೈ ವಿಜಯೇಂದ್ರ

spot_img
- Advertisement -
- Advertisement -

ಬೆಂಗಳೂರು: ‘ದೇಶದಲ್ಲಿ ಮೋದಿ ವರ್ಚಸ್ಸು ಹೆಚ್ಚಾಗುತ್ತಿದ್ದು, ಈ ಕಾರಣದಿಂದ ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸಚಿವರು ಹಿಂದೇಟು ಹಾಕುತ್ತಿದ್ದಾರೆ ಹಾಗೂ ಎದೆಗಾರಿಯನ್ನು ತೋರಿಸುತ್ತಿಲ್ಲ,’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  

ಅವರು ಶುಕ್ರವಾರದಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿಯನ್ನು ಉದ್ದೇಶಿಸಿ ಮಾತನಾಡಿ, ‘ತಳಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಲೋಕಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕರೆ ನೀಡಿದರು,’.

ಮೈಸೂರು, ಕೊಡಗು ಕ್ಷೇತ್ರಗಳಲ್ಲಿ ಜಂಟಿಯಾಗಿ ಪ್ರವಾಸ ಮಾಡಿದ್ದೇವೆ. ಈ ಮೂಲಕ ರಾಜ್ಯಕ್ಕೆ ಒಂದು ಸಂದೇಶ ನೀಡಿದ್ದೇವೆ. ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ. ಆದರೆ ಬಿಜೆಪಿ ಜೆಡಿಎಸ್‌ ಮೈತ್ರಿಯಿಂದಪ್ರಜ್ಞಾವಂತ ಮತದಾರರು ಸಂಪೂರ್ಣ ಆಶೀರ್ವಾದ ಮಾಡುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಈ ಸರ್ಕಾರ ರೈತರ ವಿರೋಧಿಯಾಗಿದೆ ಎಂದು ಆರೋಪಿಸಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

- Advertisement -
spot_img

Latest News

error: Content is protected !!