Saturday, June 6, 2026
Homeಅಪರಾಧಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ರಫೀಕ್ ಅರೆಸ್ಟ್...!

ಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ರಫೀಕ್ ಅರೆಸ್ಟ್…!

- Advertisement -
- Advertisement -

ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸುಮಾರು 2 ಲೀಟರ್ ಶ್ರೀಗಂಧದ ಎಣ್ಣೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಪೊಲೀಸರು ನ. 17 ರ ಬುಧವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಕೊಲಂಬಾಡಿ ತಾಯಲ್ ಮನೆ ನಿವಾಸಿ ಮೊಹಮ್ಮದ್ ರಫೀಕ್ ಎಂ.ಎಂ(41) ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 87, 71 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಗಾನ ಪಿ ಕುಮಾರ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಉಮೇಶ್ ಉಪ್ಪಳಿಕೆ, ಪಿಎಸ್‌ಐ ಉದಯರ ವಿ ಎಂ.ವೈ, ಅಮೀನಸಾಬ ಎಂ.ಅತ್ತಾರ , ಸಿಬ್ಬಂದಿ ಹೆಚ್.ಸಿ ಅದ್ರಾಮ, ಪ್ರವೀಣ್ ರೈ ಅವರು ಕೇರಳದ ಕಣ್ಣೂರಿನಿಂದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

Latest News

error: Content is protected !!