- Advertisement -
![]()
- Advertisement -
ಕೇರಳ: ಹಿರಿಯ ನಟ ಮೋಹನ್ ಲಾಲ್ ಆರೋಗ್ಯದಲ್ಲಿ ಏರುಪೇರಾಗಿದೆ. ಮೋಹನ್ ಲಾಲ್ ಅವರು ತೀವ್ರಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಸಮಸ್ಯೆಯಿಂದಾಗಿ ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ವೈದ್ಯರು ಮೋಹಲ್ ಲಾಲ್ ಅವರು ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆ ಎಂದಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ಅವರಿಗೆ ಐದು ದಿನಗಳವರೆಗೆ ಸಂಪೂರ್ಣ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೋಹನ್ ಲಾಲ್ ತಮ್ಮ ಚೊಚ್ಚಲ ನಿರ್ದೇಶನದ ‘ಬರೋಜ್’ ನ ಪೋಸ್ಟ್-ಪ್ರೊಡಕ್ಷನ್ ಕೆಲಸವನ್ನು ಮುಗಿಸಿ ಗುಜರಾತ್‌ನಿಂದ ಕೊಚ್ಚಿಗೆ ಮರಳಿದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ.
- Advertisement -


