Sunday, June 7, 2026
Homeಕರಾವಳಿಜಲೀಲ್ ಹತ್ಯೆ ಪ್ರಕರಣ: ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಮೊಯ್ದೀನ್ ಬಾವಾ

ಜಲೀಲ್ ಹತ್ಯೆ ಪ್ರಕರಣ: ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಮೊಯ್ದೀನ್ ಬಾವಾ

- Advertisement -
- Advertisement -

ಮಂಗಳೂರು: ಸುರತ್ಕಲ್ ನ ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆಗೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಜೊತೆ ಚರ್ಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಶಾಂತಿ ಹದಗೆಡುತ್ತಿದ್ದು ಅಮಾಯಕ ಯುವಕರು ಬಲಿಯಾಗುತ್ತಿರುವುದನ್ನು  ಮೊಯ್ದೀನ್ ಸಿಎಂ ಗಮನಕ್ಕೆ ತಂದರು. ಮುಖ್ಯಮಂತ್ರಿ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ತಕ್ಷಣವೇ ಬಂಧಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

- Advertisement -

Latest News

error: Content is protected !!