Thursday, June 4, 2026
Homeಕರಾವಳಿಬೆಳ್ತಂಗಡಿ : ದಾಖಲೆಗಳಿಲ್ಲದೆ ಎ.ಟಿ.ಎಮ್ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ಹಣ ವಶಕ್ಕೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಎ.ಟಿ.ಎಮ್ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ಹಣ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ದಾಖಲೆಗಳಿಲ್ಲದ 10 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ಎ.ಟಿ.ಎಂ ವಾಹನವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ 10 ಗಂಟೆಗೆ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ KA-53-C-2542 ಸಂಖ್ಯೆಯ ವಾಹನದಲ್ಲಿ ದಾಖಲೆಗಳಿಲ್ಲದ 10 ಲಕ್ಷ ರೂಪಾಯಿ ಮೊತ್ತವನ್ನು ರಾತ್ರಿ ಸುಮಾರು 10 ಗಂಟೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.

ವಶಪಡಿಸಿಕೊಂಡ ಹಣ ಮತ್ತು ವಾಹನವನ್ನು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆಗಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!