Monday, May 6, 2024
Homeಕರಾವಳಿಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲಿರುವ ರಾಜ್ಯ ಸರ್ಕಾರ

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲಿರುವ ರಾಜ್ಯ ಸರ್ಕಾರ

spot_img
- Advertisement -
- Advertisement -

ಬೆಂಗಳೂರು: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ವಿರಳ ಕಾಯಿಲೆಗಳಿಗೂ ರಾಜ್ಯ ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗೆ ವಿರಳ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುವ ಬಗ್ಗೆ ಇಂದು ಆದೇಶ ಹೊರಡಿಸಲಾಗಿದೆ.

ವಿರಳ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರದಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿ ಸಿದ್ಧಪಡಿಸಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ ಅವುಗಳಿಗೂ ವೆಚ್ಚ ನಿಗದಿಪಡಿಸಲಾಗಿದೆ. ಗಿರಿಜನ ಉಪ ಯೋಜನೆಯಡಿ 7.39 ಕೋಟಿ ರೂಪಾಯಿ,‌ ಪರಿಶಿಷ್ಟ ಜಾತಿ ಉಪ ಯೋಜನೆಯಡಿ 15.79 ಕೋಟಿ ರೂಪಾಯಿ ಸೇರಿ ಒಟ್ಟು 23.18 ಕೋಟಿ ರೂಪಾಯಿ ಮೊತ್ತವನ್ನು ಪುನರ್‌ ವಿನಿಯೋಗದ ಮೂಲಕ ಬಿಡುಗಡೆ ಮಾಡಲಾಗಿದೆ.

ಪಿಇಟಿ ಸ್ಕ್ಯಾನ್‌ಗೆ 10,000 ರೂಪಾಯಿ, ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂಪಾಯಿ ಮತ್ತು 21 ಲಕ್ಷ ರೂಪಾಯಿ ಹಾಗೂ ರೋಬೋಟಿಕ್‌ ಸರ್ಜರಿಗೆ 1.50 ಲಕ್ಷ ರೂಪಾಯಿ ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿಗೊಳಿಸಲಾಗಿದೆ.

- Advertisement -
spot_img

Latest News

error: Content is protected !!