Friday, May 17, 2024
Homeಕರಾವಳಿಮೂಡಬಿದರೆ; ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ ಹಾರಿಸಿದ ಕಿಡಿಗೇಡಿಗಳು; ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮೂಡಬಿದರೆ; ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ ಹಾರಿಸಿದ ಕಿಡಿಗೇಡಿಗಳು; ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

spot_img
- Advertisement -
- Advertisement -

ಮೂಡಬಿದರೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.  ಕೋಮುಗಲಭೆ ಎಬ್ಬಿಸಲು ಯಾರೋ ಕಿಡಿಗೇಡಿಗಳು ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗೇರು ಎಂಬಲ್ಲಿ ಸೆಪ್ಟೆಂಬರ್ 30 ರಂದು ಹಸಿರು ಬಾವುಟ ಹಾರಿಸಿದ್ದರು. ಈ ಬಗ್ಗೆ ಸ್ಥಳೀಯ ಪಿಡಿಓಗೆ ಮಾಹಿತಿ ಕೊಟ್ಟಿದ್ದರೂ ಆತ ಯಾವುದೇ ರೀತಿಯ ಕ್ರಮಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಮೂಡಬಿದ್ರೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಹೊಸಬೆಟ್ಟು ಪಿಡಿಓ ಶೇಖರ್ ಅವರ ವರ್ತನೆಗೆ ಕೆಂಡಾಮಂಡಲರಾಗಿದ್ದು, ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಗಣಪತಿ ಕಟ್ಟೆ ಮೇಲೆ ಮೇಲೆ‌ ಬಾವುಟ ಹಾಕಲಿಕ್ಕೆ ಪರ್ಮಿಶನ್ ತೆಗೊಂಡಿದಾರಾ?’ಎಂದು ಪಿಡಿಓ ಗೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಕೇಳಿದ್ದು, ‘ನಿನ್ನ ಕೆಲಸ ಏನೂ ಅಂತ ನಿನಗೆ ಗೊತ್ತಿಲ್ಲ, ಏನ್ ಮಾಡ್ತಾ ಇದೀಯಾ’ ‘ಅವರು ಪರ್ಮಿಷನ್ ತೆಗೊಂಡಿಲ್ಲ ಅಂದ್ರೆ ಪೊಲೀಸ್ ಕಂಪ್ಲೆಟ್ ಕೊಡಬೇಕು’ ‘ಮೊದಲು ಇವನನ್ನೇ ಆರೋಪಿ‌ ಮಾಡಬೇಕು, ‘ನಿನ್ನ ಅಧಿಕಾರ ಏನು ಅಂತ ನಿನಗೇ ಗೊತ್ತಿಲ್ಲ’ ‘ಸಂಬಂಧ ಇಲ್ಲ ಅಂತ ಹೇಳೋ ನೀನ್ಯಾಕೆ ಪಿಡಿಓ ಆಗಿದ್ದಿ’ ಅಂತ ಇನ್ಸ್ ಪೆಕ್ಟರ್ ಗರಂ ಆಗಿದ್ದಾರೆ.

ಬಳಿಕ ಪೊಲೀಸ್ ಸಿಬ್ಬಂದಿ ಮೂಲಕ ಕಟ್ಟೆ ಮೇಲೆ ಇಟ್ಟಿದ್ದ ಬಾವುಟವನ್ನು ತೆರವು ಮಾಡಲಾಗಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಅವರ ಸಮಯಪ್ರಜ್ಞೆ ಶಿವಮೊಗ್ಗದ ರೀತಿಯ ಗಲಭೆ ಆಗುವುದನ್ನು ತಪ್ಪಿಸಿದ್ದಾರೆ. ಹಲವು ದಿನಗಳ ಬಳಿಕ ಈಗ  ಸಾಮಾಜಿಕ ತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

- Advertisement -
spot_img

Latest News

error: Content is protected !!