- Advertisement -
![]()
- Advertisement -
ಮೂಡಬಿದಿರೆ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಮೃತರು.
ಪ್ರೇಮಾ ಹಾಗೂ ಅವರ ಪುತ್ರ ಸೀನ ಅವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೀನ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -


