Saturday, June 13, 2026
Homeಕರಾವಳಿಮಂಗಳೂರುಮೂಡಬಿದರೆ; ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಲಾರಿ ಚಾಲಕನ ಬಂಧನ

ಮೂಡಬಿದರೆ; ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಲಾರಿ ಚಾಲಕನ ಬಂಧನ

- Advertisement -
- Advertisement -

ಮೂಡಬಿದರೆ; ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ  ಆರೋಪದಡಿ ಲಾರಿ ಚಾಲಕನನ್ನು ಬಂಧಿಸಲಾಗಿದೆ. ಲೋಕೇಶ್ (35) ಬಂಧಿತ ಆರೋಪಿ.

ಆರೋಪಿ ಸಂತ್ರಸ್ತ ವಿದ್ಯಾರ್ಥಿನಿಗೆ ಮೊದಲೇ ಪರಿಚಯಸ್ಥನಾಗಿದ್ದ ಎನ್ನಲಾಗಿದೆ. ಕಾಲೇಜು ಮುಗಿದ ಬಳಿಕ ಯುವತಿಯು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ದಾರಿಯಲ್ಲಿ ಸಿಕ್ಕ ಲೋಕೇಶ್ ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ಹೋಗುವ ದಾರಿ ಮಧ್ಯೆ ತಾನು ಹೊಸದಾಗಿ ನಿರ್ಮಿಸುತ್ತಿರುವ ಮನೆಯನ್ನು ತೋರಿಸುವುದಾಗಿ ಹೇಳಿ ವಿದ್ಯಾರ್ಥಿನಿಯನ್ನು ಮನೆಯೊಳಗೆ ಕರೆದೊಯ್ದಿದ್ದಾನೆ. ಬಳಿಕ ಅಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಕಡೆಯಿಂದ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!