Saturday, October 17, 2026
Homeಕರಾವಳಿಮಂಗಳೂರುಮೂಡಬಿದಿರೆ: ಖಾಸಗಿ ಬಸ್‌ ಪಲ್ಟಿಯಾಗಿ ಸ್ಕೂಟರ್‌ಗೆ ಢಿಕ್ಕಿ: ಸ್ಕೂಟರ್‌ನಲ್ಲಿದ್ದ ಸಹಸವಾರೆ ಸಾವು

ಮೂಡಬಿದಿರೆ: ಖಾಸಗಿ ಬಸ್‌ ಪಲ್ಟಿಯಾಗಿ ಸ್ಕೂಟರ್‌ಗೆ ಢಿಕ್ಕಿ: ಸ್ಕೂಟರ್‌ನಲ್ಲಿದ್ದ ಸಹಸವಾರೆ ಸಾವು

- Advertisement -
- Advertisement -

ಮೂಡಬಿದಿರೆ: ಖಾಸಗಿ ಬಸ್‌ ಪಲ್ಟಿಯಾಗಿ ಸ್ಕೂಟರ್‌ಗೆ ಢಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಸಹಸವಾರೆ ಸಾವನ್ನಪ್ಪಿರುವ ಘಟನೆ ಕಾರ್ಕಳ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ನಡೆದಿದೆ.


ಮೂಡುಮಾರ್ನಾಡು ಗ್ರಾಮದ ನಿವಾಸಿ ಗೀತಾ (54) ಮೃತ ದುರ್ದೈವಿ. ಕಾರ್ಕಳದಿಂದ ಮಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್, ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಬಸ್‌ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ.


ಘಟನೆಯಲ್ಲಿ ಸ್ಕೂಟರ್‌ನಲ್ಲಿದ್ದ ಗೀತಾ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಗೀತಾ ಅವರು ಮುಂಬೈನಲ್ಲಿ ನೆಲೆಸಿದ್ದು, ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‌ನಲ್ಲಿದ್ದ ಸುಮಾರು 16 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

- Advertisement -

Latest News

error: Content is protected !!