Tuesday, October 13, 2026
Homeತಾಜಾ ಸುದ್ದಿಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ

- Advertisement -
- Advertisement -

ಬೆಂಗಳೂರು : ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ಮಿಸ್ ಆಗಿದ್ದಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದ್ದು, ಮೂಡಿಗೆರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಪಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದು, ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂಡಿಗೆರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಎಂ.ಪಿಕುಮಾರಸ್ವಾಮಿ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದ ಜೊತೆಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ್ದಾರೆ.

- Advertisement -

Latest News

error: Content is protected !!