ಚಿಕ್ಕಮಗಳೂರು; ಮೂಡಿಗೆರೆಯಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಚಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಜೆ.ಹೊಸಳ್ಳಿ ಗ್ರಾಮದ ಅನಂತರಾಮ್ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದವರಿಗೆ ಖಾರದ ಪುಡಿ ಎರಚಿ, ಮನೆಯವರಿಗೆಲ್ಲಾ ಹೆದರಿಸಿ, ತಡೆಯಲು ಬಂದ ಶ್ರೀನಿವಾಸಮೂರ್ತಿ ಎಂಬ ಕೆಲಸಗಾರರಿಗೆ ಕತ್ತಿ ಚಾಕುವಿನಿಂದ ಹಲ್ಲೆ ಮಾಡಿ ಮಾರಣಾಂತಿಕವಾದ ಗಾಯ ಮಾಡಿ, ಮನೆಯಲ್ಲಿದ್ದ ಟಿ.ವಿ.ಗಳನ್ನು ಒಡೆದು ಹಾಕಿ ಗಾರ್ಡೇಜ್ ಬೀರುವಿನಲ್ಲಿದ್ದ 5,25,000/- ರೂ. ನಗದು ಮತ್ತು 1,25,000/- ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅದರಂತೆ ಎಸ್ಪಿ ಡಾ|| ವಿಕ್ರಂ ಆಮಟೆ ಮಾರ್ಗದರರ್ಶನದಲ್ಲಿ ತನಿಖೆ ನಡೆಸಿದ ಪೊಲೀಸರು ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅನ್ಸರ್ @ ಅಂಚು, 2)ಬೆಳ್ತಂಗಡಿಯ ಖಲಂದರ್ @ ಮೊಹಮ್ಮದ್ ಗೌಸ್, 3)ಶೈನಿಂಗ್ ಕುಮಾರ್ @ ಶೈನಿ, 4)ಆಶ್ರಫ್ @ ಹಸರಬ್, 5)ಉಮೇಶ್ ರವರುಗಳನ್ನು ಪತ್ತೆಮಾಡಿ ದರೋಡೆ ಮಾಡಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆಯನ್ನು ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ. ದರೋಡೆ ಕೃತ್ಯದಲ್ಲಿ ಭಾಗಿಯಾಗಿರುವ ಉಳಿದ 5 ಜನ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.