Wednesday, June 24, 2026
Homeಕರಾವಳಿಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ:ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ:ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

- Advertisement -
- Advertisement -

ಮಂಗಳೂರು: ಜೊತೆಯಲ್ಲಿ ಇದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದನ್ನು ಗಮನಿಸಿ
ಯುವಕನನ್ನ ಹಿಂದೂ ಸಂಘಟನೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಸಂಜೆ ವೇಳೆಗೆ ಘಟನೆ ನಡೆದಿದ್ದು ಹಲ್ಲೆಗೆ ಯತ್ನ ಕೂಡಾ ನಡೆದಿದೆ ಎನ್ನಲಾಗಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಹಲ್ಲೆಗೆ ಯತ್ನಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳದಿಂದ ಪರಾರಿಯಾಗಿದ್ದು, ಬಂದರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!